ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್

0
10

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲು ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ್ದು, ಜನಾರ್ದನ ರೆಡ್ಡಿ ಯಾವುದೇ ಷರತ್ತು ಇಲ್ಲದೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಸಂಜೆ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಸೋಮವಾರ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Previous articleಬೇಜವಾಬ್ದಾರಿ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ
Next articleನೀರಿನ ಸಮಸ್ಯೆ ಪರಿಹರಿಸಲು ಜೈಲಿನಿಂದ ಸಿಎಂ ಕೇಜ್ರಿವಾಲ್ ಅವರ ಆದೇಶ