ಸತತ 8ನೇ ಬಾರಿಗೆ ಶೇ.6.5ರಷ್ಟು ರೆಪೊ ದರದಲ್ಲಿ ಬದಲಾವಣೆ ಇಲ್ಲ
ನವದೆಹಲಿ: ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ಬಡ್ಡಿ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತ. ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುತ್ತಿರುವುದನ್ನು ತಿಳಿಸಿದರು. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದರು ಎಂದು ಹೇಳಿದರು. ಆರ್ಬಿಐ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಎಂಪಿಸಿ ಸಭೆಯಲ್ಲಿ 4:2 ಬಹುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.