Home Advertisement
Home ಅಪರಾಧ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು

ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು

0
109

ಉಳ್ಳಾಲ: ಸೋಮೇಶ್ವರ ಪೆರಿಬೈಲ್ ಉಚ್ಚಿಲದ ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ನೀರಾಟವಾಡುತ್ತಿದ್ದ ಮೈಸೂರು ಮೂಲದ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ್ದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೈಸೂರು ಕುರುಬಾರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ.(21) ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲ ನಿವಾಸಿ ಪಾರ್ವತಿ ಎಸ್(20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21)ಸಾವನ್ನಪ್ಪಿದ್ದ ಯುವತಿಯರು.
ಶನಿವಾರ ಬೆಳಿಗ್ಗೆ ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2’ರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿನ ಈಜುಕೊಳಕ್ಕಿಳಿದು ನೀರಾಟವಾಡುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ. ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನು ಕಳಚಿಟ್ಟಿದ್ದು ಐ ಫೋನ್ ಒಂದನ್ನು ಈಜುಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟ ಆಡಲು ಇಳಿದಿದ್ದರು.
ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ನೀರಿನಲ್ಲಿ ಮುಳುಗಿ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ಸಿಸಿಟಿವಿಯಲ್ಲಿ ದಾಖಲಾಗಿದೆ. ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Previous article3 ವರ್ಷದಲ್ಲಿ 2,079 ಬಾಣಂತಿಯರ ಸಾವು
Next article40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿಲ್ಲ