ರೇಣುಕಾಸ್ವಾಮಿ ಕೊಲೆ ಪ್ರಕರಣ: ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ನೋಟೀಸ್

0
28

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ತಂಡ ದರ್ಶನ್ ಹಾಗೂ ಗ್ಯಾಂಗ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಜನರಿಗೆ ನೋಟೀಸ್ ನೀಡಿದೆ.
ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್‌ ಮೆರಿಟ್‌ ಮೇಲೆ ಜಾಮೀನು ಅರ್ಜಿ ನಿರ್ಧರಿಸಬೇಕು ಎಂದು ಆದೇಶಿಸಿದ ಸುಪ್ರೀಂ ಕೋರ್ಟ್‌. ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ, ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ ಇದು ಅನ್ವಯಿಸುವುದಿಲ್ಲ. ಹೈಕೋರ್ಟ್ ಫೈಂಡಿಂಗ್ಸ್ ಅನ್ವಯ ಆಗುವುದಿಲ್ಲ ಎಂದು ಸುಪ್ರೀಕೋರ್ಟ್ ಅಭಿಪ್ರಾಯಪಟ್ಟಿದೆ. ಸದ್ಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿದೆ.

Previous articleತಿರುಪತಿಯಲ್ಲಿ ಕನ್ನಡಿಗರಿಗೆ ಐಹೊಳೆ ಸಜ್ಜಾಗಿದೆ
Next articleವಿಮಾನ ನಿಲ್ದಾಣದಲ್ಲೂ ಅಗ್ಗದ ಬೆಲೆಯಲ್ಲಿ ಚಹಾ