ಬೆಂಗಳೂರು: ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಕಡಿತಗೊಳಿಸಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಒಂದೆಡೆ ಕೇಂದ್ರ ಸರ್ಕಾರ ರೈತರಿಗಾಗಿ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಹಗಲು ರಾತ್ರಿ ಶ್ರಮಿಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ ಮತ್ತಷ್ಟು ಕಡಿತ ಮಾಡಿದೆ. ನಮ್ಮದು ರೈತಪರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುವ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.