ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

0
14

ಶಿವಮೊಗ್ಗ : ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ (18) ಎಂದು ಗುರಿತಿಸಲಾಗಿದ್ದು, ಬೆಂಗಳೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು ಜೀವ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ಇಂದು ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಭೂಮಿಕಾ ದ್ವಿತೀಯ ಪಿಯುಸಿಯ ವಿದ್ಯಾರ್ಥಿನಿಯಾಗಿದ್ದು ಇಂದು ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿತ್ತು, ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಅತ್ಯಾಚಾರಿಗಳನ್ನು ಕಂಡಲ್ಲಿ ಗುಂಡಿಕ್ಕಿ
Next articleಬೀದರ್ ಜಿಲ್ಲೆಯಲ್ಲಿ ವಚನ ಸಾಹಿತ್ಯ ವಿವಿ