ದಾವಣಗೆರೆ; ತಾಲೂಕಿನ ಕೈದಾಳೆ ಗ್ರಾಮದ ಉಮೇಶ್(34) ಆಂಧ್ರಪ್ರದೇಶದ ವಿಜಯವಾಡದಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೂ, ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ. ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.