ರೈಲು ದುರಂತ: ಮೃತರ ಸಂಖ್ಯೆ 13 ಕ್ಕೆ ಏರಿಕೆ

0
5

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ವಿಶಾಖಪಟ್ಟಣಂ ರೈಲಿನ ಮೂರು ಬೋಗಿಗಳು ಹಳಿತಪ್ಪಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೇರಿದೆ.
ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ವಿಳಿಯನಗರಂ ಜಿಲ್ಲೆಯ ಕೊತವಲಸ ರೈಲು ನಿಲ್ದಾಣದ ಬಳಿ ರವಿವಾರ ಮುಸ್ಸಂಜೆ 7ರ ಸುಮಾರಿಗೆ ಈ ದುರಂತ ಸಂಭವಿಸಿದೆ. ರೈಲು ಅಪಘಾತದಲ್ಲಿ ಕನಿಷ್ಠ 50 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಮತ್ತು ವಿಜಯನಗರಂ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Previous articleಇಬ್ಬರು ಆರ್ ಎಫ್ ಓ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
Next articleಬೆಂಗಳೂರಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಬಸ್‌ಗಳು