ರೈಲು ನಿಲ್ದಾಣ, ಧಾರ್ಮಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ

0
32

ಜೈಪುರ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವಾರು ರೈಲ್ವೆ ನಿಲ್ದಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಈ ಕುರಿತಂತೆ ಅಂಚೆ ಪತ್ರವೊಂದು ಹನುಮಾನ್‌ಗಢ ರೈಲು ನಿಲ್ದಾಣಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 2 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಅಕ್ಟೋಬರ್‌ 30ರಂದು ಗಂಗಾನಗರ, ಹನುಮಾನ್‌ಗಢ, ಜೋಧ್‌ಪುರ, ಬಿಕಾನೇರ್, ಕೋಟಾ, ಬುಂಡಿ, ಉದಯಪುರ, ಜೈಪುರದ ರೈಲ್ವೆ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಅಕ್ಟೋಬರ್‌ನಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಜೈಷ್-ಎ-ಮೊಹಮ್ಮದ್ ಹೆಸರಿನಲ್ಲಿದ್ದ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್‌ಪಿ), ಸ್ಥಳೀಯ ಪೊಲೀಸರು ಮತ್ತು ಬಿಎಸ್‌ಎಫ್ ಸಿಬ್ಬಂದಿ ರೈಲು ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ ಎಂದು ಮೀನಾ ಹೇಳಿದ್ದಾರೆ. ಪತ್ರ ಜೈಷ್ ಎ ಹಮ್ಮದ್ ಹೆಸರಿನಲ್ಲಿದೆ ಎಂದು ತಿಳಿಸಿದ್ದಾರೆ.

Previous articleಕರ್ತವ್ಯನಿರತ ಪೊಲೀಸ್ ಪೇದೆಗೆ ಹಾರ್ಟ್ ಅಟ್ಯಾಕ್
Next articleಸಿಎಂ ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ