ರೈಲು ನಿಲ್ದಾಣ ಸ್ಫೋಟ: 20 ಜನರ ಸಾವು, 30 ಮಂದಿ ಗಾಯ

0
23

ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಾಫರ್ ಎಕ್ಸ್‌ಪ್ರೆಸ್ ಬೆಳಗ್ಗೆ 9 ಗಂಟೆಗೆ ಪೇಶಾವರಕ್ಕೆ ಹೊರಡಬೇಕಿತ್ತು. ಸ್ಫೋಟ ಸಂಭವಿಸಿದಾಗ ರೈಲು ಇನ್ನೂ ಪ್ಲಾಟ್‌ಫಾರ್ಮ್‌ಗೆ ಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಲ್ದಾಣದ ಸಾಮಾನ್ಯ ಜನಸಂದಣಿಯನ್ನು ಗಮನಿಸಿದರೆ, ಹೆಚ್ಚಿನ ಪ್ರಮಾಣದಲ್ಲಿ ಸಾವು-ನೋವು ಆಗಿರುವ ಅಪಾಯವಿದೆ ಎಂದು ವರದಿ ಹೇಳಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

Previous articleಪ್ರಾಸಿಕ್ಯೂಶನ್ ಅನುಮತಿ ಹಿಂದೆ ದುರುದ್ದೇಶ
Next articleತಿಳಿದೂ ಮಾಡುತ್ತಿದ್ದಾರೋ ತಿಳಿಯದೇ ಮಾಡುತ್ತಿದ್ದಾರೋ ಅನ್ನೋದೇ ಯಕ್ಷ ಪ್ರಶ್ನೆ…