ರೌಡಿಶೀಟರ್ ಕಾಲಿಗೆ ಗುಂಡು

0
13

ಬೀದರ್ : ಕಿಡ್ನಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ನನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ನ ಕಾಲಿಗೆ ಗುಂಡು ಹೊಡೆಡಿದಿರುವ ಘಟನೆ ಭಾಲ್ಕಿ ತಾಲೂಕಿನ ಕುರುಬಖೇಳಗಿ ಗ್ರಾಮದ ಸಿದ್ದೇಶ್ವರ ಸ್ವಾಮಿ ಮಂದಿರದ ಬಳಿ ನಡೆದಿದೆ. ಗ್ರಾಮದ ಸಿದ್ದೇಶ್ವರ ದೇವಸ್ಥಾನದ ಬಳಿ ಅಡಗಿ ಕುಳಿತಿದ್ದ ಖಚಿತ ಮಾಹಿತಿ ಮೇರೆಗೆ ರೌಡಿಶೀಟರ್ ಸಂಗಮೇಶ್ ನನ್ನು ಹಿಡಿಯಲು ಭಾಲ್ಕಿ ತಾಲ್ಲೂಕಿನ ಧನ್ನೂರ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ಸಂಬಂಧ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ರೌಡಿಶೀಟರ್ ನ ಕಾಲಿಗೆ ಹೊಡೆದಿದ್ದಾರೆ. ಗಾಯಗೊಂಡ ಈತನನ್ನು ಬ್ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Previous articleಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ನಿಧನ
Next articleಚಿನ್ನ ಗೆದ್ದ ಅವನಿ ಲೇಖರಾ