ಲಂಕೆ ದಹನದಂತೆ ನಿಮ್ಮ ಅವನತಿ

0
18

ಮಂಡ್ಯ: ಹನುಮಂತನ‌ ಕೆಣಕ್ಕಿದ್ದಕ್ಕೆ ಲಂಕ ದಹನವಾಯ್ತು. ಅದೇ ರೀತಿ ನಿಮ್ಮ ಅವನತಿ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಅವರು, ಸರಕಾರದ ವಿರುದ್ಧ ಹರಿಹಾಯ್ದರು. ಲಾಠಿ ಚಾರ್ಜ್ ಸರಕಾರದ ರಾಕ್ಷಸಿ ಪ್ರವೃತ್ತಿ ತೋರಿಸುತ್ತದೆ. ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದರೆ ಸಾಲದು, ರಾಮನ ನಡವಳಿಕೆ ಇರಬೇಕು. ಅಧಿಕಾರಿಗಳು ತಕ್ಷಣ ಕೆರಗೋಡಿನಲ್ಲಿ ಶಾಂತಿ ಸಭೆ ಕರೆಯಬೇಕು. ಧ್ವಜದ ಮರು ಸ್ಥಾಪನೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಇರುತ್ತದೆ ಎಂದರು.

Previous articleಮೋದಿ ಅಕ್ಕಿ ಕಳ್ಳತನವಾದರೂ ಮೌನವಾಗಿರುವುದೇಕೆ?
Next article203 ತಾಲ್ಲೂಕುಗಳಲ್ಲಿ‌ ಬರ