ಹುಬ್ಬಳ್ಳಿ: ಅಂಜುಮನ್ ಸಂಸ್ಥೆಯವರಿಗೆ ಅಷ್ಟೊಂದು ಕಳಕಳಿಯಿದ್ದರೆ, ಫಯಾಜ್ ಕುಟುಂಬಕ್ಕೆ ಬಹಿಷ್ಕಾರ ಹಾಕಬೇಕಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ, ಹಿಂದೂ ಹುಡುಗಿಯರನ್ನು ಪ್ರೀತಿಸಿದರೆ ಬಹಿಷ್ಕಾರ ಹಾಕುತ್ತೇವೆ, ಲವ್ ಜಿಹಾದ್ ನಡೆಸಿದರೆ ಸ್ಮಶಾನದಲ್ಲಿ ಜಾಗ ನೀಡುವುದಿಲ್ಲ, ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಫತ್ವಾ ಹೊರಡಿಸಲಿ. ಅದನ್ನು ಬಿಟ್ಟು ನಾಟಕ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.