ಬೆಳಗಾವಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಅವರು, ಕಾಂಗ್ರೆಸ್ ಹೈಕಮಾಂಡ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮತ ನೀಡಿದ್ದಾರೆ. ಲಿಂಗಾಯತ ಸಮಾಜದಿಂದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದರು.


























