‘ಲಿಡ್ಕರ್’ಗೆ ರಾಯಭಾರಿಯಾಗಿ ಡಾಲಿ

0
12

ಬೆಂಗಳೂರು: ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಮುಂದೆ ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇನ್ನು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟ ಡಾಲಿ ಧನಂಜಯ ಕಾಯಕ ವರ್ಗದ ಕುಶಲಕರ್ಮಿಗಳ ಅದ್ಭುತ ಕಲಾಕೃತಿಗಳನ್ನು ರಾಜ್ಯದ ಜನರಿಗೆ ವ್ಯಾಪಕವಾಗಿ ತಲುಪಿಸುವ ಲಿಡ್ಕರ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಲು ತುಂಬ ಹೆಮ್ಮೆಯಿದೆ. ಈ ತರಹದ ಒಳ್ಳೆ ಕೆಲಸಕ್ಕೆ ನನ್ನನ್ನು ಭಾಗಿಯಾಗಿಸಿದ ಲಿಡ್ಕರ್‌ನ ವ್ಯವಸ್ಥಾಪಕ ನಿರ್ದೇಶಕರಾದ ವಸುಂಧರ ಹಾಗೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಗೆಳೆಯರಾದ ಕಿರಣ್ ಹಾಗು ಸೂರ್ಯ ಅವರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Previous articleಅನ್ನಕ್ಕಾಗಿ ಬಂದವರು ಮೆಕ್ಕೆಜೋಳದಲ್ಲೇ ಸಮಾಧಿ
Next articleಇಬ್ಬರು ಮಹಾನುಭಾವರಿಂದ ರಾಜ್ಯ ಹಾಳಾಗಿದೆ