ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

0
39

ನವದೆಹಲಿ: ಲೋಕಪಾಲ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ,
ಜನವರಿ 27 ರಂದು ಲೋಕಪಾಲ್ ಹೊರಡಿಸಿದ್ದ ಆದೇಶಕ್ಕೆ ಆರಂಭಿಸಿದ್ದ ಸ್ವಯಂಪ್ರೇರಿತ ವಿಚಾರಣೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಪಟ್ಟವರಿಗೆ ನೊಟೀಸ್ ಜಾರಿ ಮಾಡಿದೆ.
ಹಾಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ದೂರುಗಳನ್ನು ಸ್ವೀಕರಿಸಿದ್ದ ಲೋಕಪಾಲ್ ಆದೇಶವು ತುಂಬಾ ಗೊಂದಲಕಾರಿಯಾಗಿದೆ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅಭಯ್ ಎಸ್ ಓಕಾ ಅವರನ್ನೂ ಒಳಗೊಂಡ ವಿಶೇಷ ಪೀಠವು, ದೂರುದಾರರು ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ತಡೆಯಾಜ್ಞೆ ನೀಡಿದೆ. ದೂರುದಾರರು ಸಲ್ಲಿಸಿದ ದೂರನ್ನು ಗೌಪ್ಯವಾಗಿಡುವಂತೆಯೂ ಅದು ಸೂಚಿಸಿದೆ.

Previous articleಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ
Next articleಶ್ರೀ ಸಿದ್ಧಾರೂಢರು, ಗುರುನಾಥರೂಢರ ಅದ್ವೈತ ಚಿಂತನೆ ಸೂರ್ಯ, ಚಂದ್ರ ಇರುವವರೆಗೂ ಶಾಶ್ವತ