Home ತಾಜಾ ಸುದ್ದಿ ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ

0

ಬೆಂಗಳೂರು: ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದರು.
ಶಿವಸೇನೆ ಮತ್ತು ಎನ್‌ಸಿಪಿಯಿಂದ ವಲಸೆ ಹೋದವರು ಈಗ ಮಾತೃಪಕ್ಷದತ್ತ ಮರಳುತ್ತಿದ್ದಾರೆ. ಪ್ರಧಾನಿಯವರು ಸೋಲಿನ ಆತಂಕದಲ್ಲಿ ಉದ್ಧವ್‌ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.

Exit mobile version