ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

0
43

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದರು.
ಮುಡಾ ಪ್ರಕರಣದ ವಿಚಾರಣೆ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನೋಟಿಸ್​ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ರಸ್ತೆ ಮೂಲಕ ಚನ್ನಪಟ್ಟಣ ಮಾರ್ಗವಾಗಿ ಆಗಮಿಸಿರುವ ಸಿದ್ದರಾಮಯ್ಯ ಉಪಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲೇ ಬಂದರು. ಬೆಳಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದು, ಮುಡಾ ನಿವೇಶನ ಹಂಚಿಕೆ ಸಂಬಂಧ ವಿಚಾರಣೆ ಎದುರಿಸುತ್ತಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

Previous articleಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಗಾಯಕಿ ಶಾರದಾ ಸಿನ್ಹಾ ನಿಧನ
Next articleKSRTC ಯ ಅವತಾರ್‌ ಬುಕ್ಕಿಂಗ್‌ನಲ್ಲಿ ದಾಖಲೆ