ಲೋಕೋ ಪೈಲಟ್ ಹುದ್ದೆ: ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ

0
23

ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲ

ಬೆಂಗಳೂರು: ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆಗೆ ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ಇಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ ಸೋಮಣ್ಣರವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ. ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ ಸೋಮಣ್ಣ ರವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು ಎಂದಿದ್ದಾರೆ.

Previous articleಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ
Next articleಮಳೆ ನಿಲ್ಲಿಸುವಂತೆ ಕಳಸೇಶ್ವರ ಸ್ವಾಮಿಗೆ ಭಕ್ತರ ಮನವಿ