ವಕ್ಪ್ ತಿದ್ದುಪಡಿ ಮಸೂದೆ ಅನುಮೋದನೆ: ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ ಕರೆ

0
24

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ರಾಜ್ಯದಲ್ಲಿ ವಕ್ಫ್ ಆಸ್ತಿ ಅಕ್ರಮದ ಬಗ್ಗೆ ವರದಿ ನೀಡಿದ್ದ ರಾಜ್ಯ ಅಲ್ಪಸಂಖ್ಯಾತ ಆಯೋಗ ಮತ್ತು ವಕ್ಫ್ ಕಮಿಟಿಯ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ ಕರೆಗಳು ಬಂದಿವೆ.
ಎರಡು ದಿನಗಳಿಂದ ನಿರಂತರ ಇಂಟರ್‌ನೆಟ್ ಕರೆ ಮೂಲಕ ಬೆದರಿಕೆ ಬರುತ್ತಿದೆ. ಕನ್ನಡ, ಇಂಗ್ಲಿಷ್, ಉರ್ದು, ಮರಾಠಿ ಭಾಷೆಗಳಲ್ಲಿ ಬೆದರಿಕೆ ಹಾಕುತ್ತಿದ್ದಾರೆ. ನಿನ್ನನ್ನು ಬಿಡುವುದಿಲ್ಲ, ನಿನ್ನ ವರದಿಯಿಂದ ತೊಂದರೆಯಾಗಿದೆ ಎಂಬ ಕರೆಗಳು ಬರುತ್ತಿದೆ ಅನ್ವರ್ ಮಾಣಿಪ್ಪಾಡಿ ತಿಳಿಸಿದ್ದಾರೆ.
ನೀನು ಬಹಳಷ್ಟು ನಾಯಕರು, ವ್ಯಕ್ತಿಗಳ ವಿರುದ್ಧ ತಪ್ಪು ಮಾಹಿತಿ ಕೊಟ್ಟಿದ್ದೀಯ. ಎಲ್ಲರೂ ನೊಂದಿದ್ದಾರೆ. ಯಾರು ಕೂಡ ನಿನ್ನನ್ನು ಕ್ಷಮಿಸಲ್ಲ. ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ನನ್ನ ಸಂಬಂಧಿಯೊಬ್ಬರು ಪೊಲೀಸ್ ಅಧಿಕಾರಿ ಅವರು ನನಗೆ ಕರೆ ಮಾಡಿ ಜೋಪಾನವಾಗಿರಪ್ಪ, ಮನೆಯಿಂದ ಹೊರಗಡೆ ಒಬ್ಬನೇ ಹೋಗಬೇಡ ಎಂದು ಸಲಹೆ ನೀಡಿದ್ದಾರೆ, ಬೆದರಿಕೆ ಕುರಿತು ಮಂಗಳೂರು ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿ ರಕ್ಷಣೆ ಕೋರಿದ್ದೇನೆ ಎಂದು ಮಾಣಿಪ್ಪಾಡಿ ಹೇಳಿದ್ದಾರೆ.
ಸದ್ಯ ಮಾಣಿಪ್ಪಾಡಿ ಅವರು ಮಂಗಳೂರಿನಲ್ಲಿದ್ದು ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous articleನನ್ನ ಮೊಬೈಲ್ ಲೋಕೇಷನ್ ಸಂಗ್ರಹ: ಶಾಸಕರ ಆರೋಪ
Next articleಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಅವಕಾಶ