Home ತಾಜಾ ಸುದ್ದಿ ವಕ್ಫ್ ಆಸ್ತಿ: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ

ವಕ್ಫ್ ಆಸ್ತಿ: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ

0

ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿಯ ಕುರಿತಾಗಿ ಇರುವ ಗೊಂದಲಗಳಿಗೆ ಸ್ಪಷ್ಟತೆ ತರಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ, ಜಿಲ್ಲೆಯ ಎಲ್ಲ ತಹಶೀಲ್ದಾರ್, ಎಡಿಸಿ, ಎಸಿಗಳು, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲೆಗೆ ಸಂಬಂಧಿಸಿದ ತಹಶೀಲ್ದಾರ್ ಗಳು, ವಕ್ಫ್ ಮಂಡಳಿ ಹಾಗೂ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ, ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು ಜಿಲ್ಲೆಯಲ್ಲಿ ವಕ್ಫ್ ಆಸ್ತಿಯ ಕುರಿತಾಗಿ ಇರುವ ಗೊಂದಲಗಳಿಗೆ ಸ್ಪಷ್ಟತೆ ತರಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ, ಜಿಲ್ಲೆಯ ಎಲ್ಲ ತಹಶೀಲ್ದಾರ್, ಎಡಿಸಿ, ಎಸಿಗಳು, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಲಾಗುವುದು ಈ ಟಾಸ್ಕ್ ಫೋರ್ಸ್ 1974ರಲ್ಲಿ ಪ್ರಕಟಿತ ಗೆಜೆಟ್  ಹಾಗೂ 1964-74 ರ ಅವಧಿಯ ಎಲ್ಲ ಭೂ ದಾಖಲೆಗಳನ್ನು ಪರಿಶೀಲಿಸಿ, ತಪ್ಪುಗಳು ಕಂಡುಬಂದರೆ ಸರಿಪಡಿಸಲಿದೆ. ಯಾರಿಗೂ ಅನ್ಯಾಯವಾಗದಂತೆ ಎಲ್ಲರ ಹಕ್ಕುಗಳನ್ನು ರಕ್ಷಿಸಲು #ನಮ್ಮಸರಕಾರ ಬದ್ಧವಾಗಿದೆ ಎಂದಿದ್ದಾರೆ.

Exit mobile version