ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುವ ಸಂಸತ್ತಿನ ಜಂಟಿ ಸಮಿತಿಯು ತನ್ನ ವರದಿಯನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಕ್ಫ್ ತಿದ್ದುಪಡಿ ಮಸೂದೆಯ ಅಧ್ಯಕ್ಷ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಯ ಸದಸ್ಯರು ಸಲ್ಲಿಸಿದ್ದಾರೆ. ನಿನ್ನೆ ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ಸಂಸತ್ತಿನ ಜಂಟಿ ಸಮಿತಿಯು ಕರಡು ಶಾಸನದ ವರದಿಯನ್ನು 15-11 ಬಹುಮತದಿಂದ ಅಂಗೀಕರಿಸಿತು. ಆಡಳಿತಾರೂಢ ಬಿಜೆಪಿ ಸದಸ್ಯರು ಸೂಚಿಸಿದ ಬದಲಾವಣೆಗಳನ್ನು ಒಳಗೊಂಡಿರುವ ಜೆಪಿಸಿ ವರದಿಯನ್ನು ಸಮಿತಿಯು ಬುಧವಾರ ಬಹುಮತದ ಮತದಿಂದ ಅಂಗೀಕರಿಸಿತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಈ ಪ್ರಕ್ರಿಯೆಯು ಪ್ರಜಾಪ್ರಭುತ್ವ ವಿರೋಧಿ ಎಂದು ಟೀಕಿಸಿದ್ದಾರೆ. ವಕ್ಫ್(ತಿದ್ದುಪಡಿ) ಮಸೂದೆ-2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ್ದರು. ಮಸೂದೆಯನ್ನು 2024ರ ಆಗಸ್ಟ್ 8ರಂದು ಜಂಟಿ ಸಂಸದೀಯ ಸಮಿತಿಗೆ(ಜೆಪಿಸಿ) ಉಲ್ಲೇಖಿಸಲಾಗಿತ್ತು.