ಕೊಪ್ಪಳ: ಕರ್ನಾಟಕ ಅರಣ್ಯ ಇಲಾಖೆಯ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ ಕಾರ್ಯಕ್ರಮ ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಯಶಸ್ವಿಯಾಗಿ ಜರುಗಿತು.
ಸಂಸದ ಕೆ.ರಾಜಶೇಖರ ಹಿಟ್ನಾಳ ಚಾಲನೆಯೊಂದಿಗೆ ಆರಂಭವಾದ ನಗರದ ಶ್ರೀಗವಿಮಠದಿಂದ ಆರಂಭವಾದ ಗದಗ ರಸ್ತೆಯ ಮಾರ್ಗವಾಗಿ ಬಸವೇಶ್ವರ ವೃತ್ತ, ಅಶೋಕ ವೃತ್ತ, ಕೇಂದ್ರೀಯ ಬಸ್ ನಿಲ್ದಾಣದ ಮಾರ್ಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದ ವರೆಗೆ ಸಾಗಿತು.
ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಕೊಪ್ಪಳ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ ಬಸಿಯಾ ಪೆಂಡಾರಿ ಇದ್ದರು.