Home ತಾಜಾ ಸುದ್ದಿ ವಯನಾಡ್ ದುರಂತ: 100 ಮನೆಗಳ ನಿರ್ಮಾಣಕ್ಕೆ ಸಿದ್ದರಾಮಯ್ಯ ಭರವಸೆ

ವಯನಾಡ್ ದುರಂತ: 100 ಮನೆಗಳ ನಿರ್ಮಾಣಕ್ಕೆ ಸಿದ್ದರಾಮಯ್ಯ ಭರವಸೆ

0

ಬೆಂಗಳೂರು: ವಯನಾಡ್ ಭೂಕುಸಿತದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೆರವಿನ ಭರವಸೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದಿದ್ದಾರೆ.

Exit mobile version