Home ಅಪರಾಧ ವಸತಿಗೃಹದಲ್ಲಿ ಇಂಜಿನೀಯರ್ ಆತ್ಮಹತ್ಯೆ

ವಸತಿಗೃಹದಲ್ಲಿ ಇಂಜಿನೀಯರ್ ಆತ್ಮಹತ್ಯೆ

0

ಗದಗ: ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಇಂಜಿನೀಯರ್ ಖಾಸಗಿ ವಸತಿಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಶಂಕರಗೌಡ ಪಾಟೀಲ(೫೪) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಮೃತ ಇಂಜಿನೀಯರ್ ಪತ್ನಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ಹೊಸ ಬಸ್ ನಿಲ್ದಾಣದ ಹತ್ತಿರದ ಪಲ್ಲವಿ ಲಾಡ್ಜ್‌ನಲ್ಲಿ ಮುಂಜಾನೆ ಈ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ ಸೈಟ್ ಹತ್ತಿರ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ವಾಪಸ್ ಮನೆಗೆ ಬಾರದೆ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಅತ್ಮಹತ್ಯೆ ಮಾಡಿಕೊಂಡಿರುವ ಶಂಕರಗೌಡ ಪಾಟೀಲ ರೋಣ ತಾಲೂಕಿನಲ್ಲಿ ನಿರ್ಮಿತಿ ಕೇಂದ್ರದ ಕಾಮಗಾರಿಗಳನ್ನು ನೋಡಿಕೊಳ್ಳುತ್ತಿದ್ದರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Exit mobile version