ವಾಣಿಜ್ಯ ತೆರಿಗೆ ಅಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ

0
12

ಚಿಕ್ಕಮಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ತರೀಕೆರೆ ವಾಣಿಜ್ಯ ತೆರಿಗೆ ಅಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಕಡೂರಿನಲ್ಲಿ ವಾಸವಾಗಿರುವ ವಾಣಿಜ್ಯ ತೆರಿಗೆ ಅಧಿಕಾರಿ ಕೆ.ಆರ್. ನೇತ್ರಾವತಿ ಕಳೆದ 13 ವರ್ಷಗಳ ಅವಧಿಯಲ್ಲಿ ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿಯನ್ನು ಹೊಂದಿರುವ ಆರೋಪದ ಮೇಲೆ ಇಂದು ಬೆಳಿಗ್ಗೆ ಲೋಕಾಯುಕ್ತ ಕಾರ್ಯಾಚರಣೆ ನಡೆಸಿದೆ.

ಲೋಕಾಯುಕ್ತ ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಇನ್ಸ್ಪೆಕ್ಟರ್ ವೇದಾವತಿ, ಅನಿಲ್ ನಾಯಕ್ ,ಲೋಕೇಶ್, ಸವಿನಯ್, ಸಲ್ಮಾ ಪಾಲ್ಗೊಂಡಿದ್ದರು.

Previous articleಸಿಬಿಎಸ್‌ಇ: ೨ ಬಾರಿ ಬೋರ್ಡ್ ಪರೀಕ್ಷೆ
Next articleಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯ ಕೊಲೆ