ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಿದರು.
ವಾಣಿಜ್ಯ ನಗರಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಡ್ಡಾ ಅವರನ್ನು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸ್ವಾಗತಿಸಿದರು. ಶಾಲು ಹೊದಿಸಿ, ಪುಷ್ಪ ಮಾಲೆ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.
ವಿಮಾನ ನಿಲ್ದಾಣದಿಂದ ನೇರ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ಗೆ ಪ್ರಲ್ಹಾದ ಜೋಶಿ ಅವರೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ತೆಂಗಿನಕಾಯಿ ಸೇರಿದಂತೆ ಬಿಜೆಪಿ ಪ್ರಮುಖರು ಇದ್ದರು.