ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

0
8
ಆತ್ಮಹತ್ಯೆ

ಶಿವಮೊಗ್ಗ: ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಈ ಘಟನೆ ನಡೆದಿದ್ದು, ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ತಮ್ಮ ನಿವಾಸದಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ, 6 ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚಂದ್ರಶೇಖರ್, ಡೆತ್ ನೋಟ್‌ನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಇಲಾಖಾ ಅಧಿಕಾರಿಗಳು ಹಣ ವರ್ಗಾವಣೆ ಮಾಡಲು ಒತ್ತಡ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous articleಜಿಮ್ನಾಸ್ಟಿಕ್‍ನಲ್ಲಿ ಭಾರತಕ್ಕೆ ಮೊದಲ ಚಿನ್ನ
Next articleಅವಳಿನಗರದ ರೌಡಿಶೀಟರ್‌ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು