ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿರೋದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗೆ ನಾನು ಈಗ ಸಚಿವ. ನಾಗೇಂದ್ರ ರಾಜೀನಾಮೆ ಕೊಟ್ಡ ಮೇಲೆ ನಾನು ಆ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ನಾವು ಅಕ್ರಮ ಆಗಿಲ್ಲ ಅಂತ ಹೇಳ್ತಿಲ್ಲ, ಅಕ್ರಮ ಆಗಿದೆ. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.