SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ

ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ

0
171

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಖಜಾನೆಯ ಮೂಲಕವೇ 187 ಕೋಟಿಯು ಬೇನಾಮಿ ಖಾತೆಗಳಿಗೆ ಜಮಾ ಆಗಿದೆ. ಇದು ಜನರ ತೆರಿಗೆ ಹಣ. ಈ ಹಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಿತ್ತು. ಅದರ ಬದಲು ಬೇನಾಮಿ ಖಾತೆಗಳಿಗೆ ವರ್ಗಾವಣೆಯಾಗಿ ದುರುಪಯೋಗ ಆಗಿದೆ. ಇದನ್ನು ಸರ್ಕಾರ ಸಹ ಒಪ್ಪಿದೆ. ಮುಖ್ಯಮಂತ್ರಿಯವರ ಬಳಿಯೇ ಹಣಕಾಸು ಖಾತೆಯೂ ಇದೆ. ಆಡಳಿತ ವ್ಯವಸ್ಥೆಯ ದುರುಪಯೋಗದ ಬಗ್ಗೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.