ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಬಿ. ನಾಗೇಂದ್ರ ಬಂಧಿಸಿತ್ತು. ಸದ್ಯ ಜಾಮೀನು ಪಡೆದು ಅವರು ಬಿಡುಗಡೆಗೊಂಡಿದ್ದಾರೆ. ಜಾರಿ ನಿರ್ದೇಶನಾಲಯ ಹಗರಣದ ತನಿಖೆ ಕುರಿತು ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದುವರೆಗೂ 89.62 ಕೋಟಿ ಹಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದೆ.























