ದಾವಣಗೆರೆ: ಮೈಸೂರು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ ಸಿಂಹ ವಿಚಾರದಲ್ಲಿ ನಡೆದಿರುವುದು ರಾಜಕೀಯ ಪ್ರೇರಿತವಾದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಮ ಸಿಂಹನನ್ನು ಸುಖಾಸುಮ್ಮನೆ ಕಾಡುಗಳ್ಳನಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷದ ಹತಾಶೆ ತೋರಿಸುತ್ತದೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದೆ ಎಂದರು.