ವಿಜಯದ ಬಾವುಟ ಹಾರಿಸಲು ಸಜ್ಜಾಗಿದೆ ಶಿಗ್ಗಾಂವಿ

ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಯುವನಾಯಕ ಭರತ್ ಬಸವರಾಜ್ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಶಿಗ್ಗಾಂವಿ ಸವಣೂರು ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆ, ಮಾಜಿ ಮುಖ್ಯಮಂತ್ರಿಗಳು ಹಾಗೂ ಈ‌ ಭಾಗದ ಮಾಜಿ ಶಾಸಕ ಬಸವರಾಜ ಬೊಮ್ಮಾಯಿಯವರ ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ನಮ್ಮ ಪಕ್ಷದ ಗೆಲುವಿಗೆ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಇಂದಿನ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಾರ್ವಜನಿಕರು ಸೇರಿದ್ದು, ಶಿಗ್ಗಾಂವಿಗೆ ಮತ್ತೊಮ್ಮೆ ಬಿಜೆಪಿಯೇ ಆಯ್ಕೆ ಎಂಬುದನ್ನು ತೋರಿಸಿದ್ದಾರೆ. ರಾಷ್ಟ್ರದ ಸಮಗ್ರ ಪ್ರಗತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈಬಲಪಡಿಸಲು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ವಿಕಸಿತ ಭಾರತದ ಸಂಕಲ್ಪಕ್ಕೆ ನಾವೆಲ್ಲರೂ ಜೊತೆಯಾಗಬೇಕಿದೆ ಎಂದಿದ್ದಾರೆ.