ಬಸವನಾಡಿನ ಭವಿಷ್ಯವನ್ನು ಉಜ್ವಲಗೊಳಿಸಲು ಬದ್ದನಾಗಿದ್ದೇನೆ.
ಬೆಂಗಳೂರು: ಬಸವನಾಡಿನ ಭವಿಷ್ಯವನ್ನು ಉಜ್ವಲಗೊಳಿಸಲು ಬದ್ದನಾಗಿದ್ದೇನೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಂಯುಕ್ತ ಕರ್ನಾಟಕ ವರದಿ ಹಂಚಿಕೊಂಡು ಪೋಸ್ಟ್ ಮಾಡಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈಗಾಗಲೇ ಜಿಲ್ಲೆಗೆ ರೂ.42,000 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದವಾಗಿದ್ದು, ಅದರಲ್ಲಿ ರೂ.34,000 ಕೋಟಿ ಹೂಡಿಕೆಗೆ ಸ್ಥಳ ಗುರುತಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 15,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಸಮೃದ್ಧ ಭೂಮಿ, ವಿದ್ಯುತ್ ಹಾಗೂ ನೀರಿನ ಸಂಪತ್ತನ್ನು ಹೊಂದಿದ್ದು, ಕೈಗಾರಿಕೆಗಳ ಬೆಳವಣಿಗೆಗೆ ಸಂಪೂರ್ಣ ಅನುಕೂಲಕರವಾಗಿದ್ದು, ಬಸವನಾಡಿನ ಭವಿಷ್ಯವನ್ನು ಉಜ್ವಲಗೊಳಿಸಲು ಬದ್ದನಾಗಿದ್ದೇನೆ ಎಂದಿದ್ದಾರೆ.