ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯರನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಯಾದ ಬಳಿ ಕಾನೂನುಬದ್ಧವಾಗಿ ಆಸ್ತಿ ಘೋಷಣಾ ಪತ್ರ ಸಲ್ಲಿಸಿಲ್ಲ ಎಂದು ಮಾಜಿ ಸದಸ್ಯರಾದ ಪ್ರಕಾಶ ಮಿರ್ಜಿ, ಮೈನುದ್ದೀನ್ ಬೀಳಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ದೂರನ್ನು ಆಲಿಸಿದ್ದ ಹೈಕೋರ್ಟ್ ಈ ಬಗ್ಗೆ ಕ್ರಮ ಕೈಗೊಳುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದ್ದು, ಎಲ್ಲ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿದೆ. ಬಿಜೆಪಿಯ 17, ಕಾಂಗ್ರೆಸ್ 10, ಜೆಡಿಎಸ್ 1, ಎಂಐಎಂ 2, ಪಕ್ಷೇತರರು 5 ಸದಸ್ಯರ ಸದಸ್ಯತ್ವ ಅನರ್ಹವಾಗಿದೆ.
2022ರಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಈ ಸದಸ್ಯರು ಆಯ್ಕೆಯಾಗಿದ್ದರು. 2024ರ ಜನವರಿ 9ರಂದು ಮೇಯರ್, ಉಪ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್‌ನ ಮೆಹೆಜಬೀನ್ ಹೊರ್ತಿ ಮೇಯರ್ ಆಗಿ, ದಿನೇಶ ಹಳ್ಳಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ಯಾವುದೇ ಸದಸ್ಯರು ಕಾನೂನು ಪ್ರಕಾರ ಆಸ್ತಿ ಘೋಷಣಾ ಪತ್ರ ಸಲ್ಲಿಕೆ ಮಾಡಿರಲಿಲ್ಲ.