ವಿಜಯಪುರ: ರಾಜು ಆಲಗೂರ ನಾಮಪತ್ರ ಸಲ್ಲಿಕೆ

0
7

ವಿಜಯಪುರ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ, ಆಶೀರ್ವಾದ ಪಡೆದಿದ್ದಾರೆ. ನಗರದ ಸಿದ್ಧೇಶ್ವರ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು
ಸಚಿವ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕ ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠ್ಠಲ ಕಟಕಧೋಂಡ, ಸಿ.ಎಸ್.ನಾಡಗೌಡ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಕನಾನ್ ಮುಶ್ರೀಫ್, ಸಂಗಮೇಶ ಬಬಲೇಶ್ವರ, ಮಹಾಂತೇಶ ಬಿರಾದಾರ, ಶರಣಪ್ಪ ಸುಣಗಾರ, ಸೋಮನಾಥ ಕಳ್ಳಿಮನಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಾಮ ಪತ್ರ ಸಲ್ಲಿಕೆಯ ಮುನ್ನ ಬೃಹತ್ ಮೆರವಣಿಗೆ ನಡೆಯಿತು.

Previous articleದಾವಣಗೆರೆ: ಗಾಯಿತ್ರಿ ಸಿದ್ದೇಶ್ವರ ನಾಮಪತ್ರ ಸಲ್ಲಿಕೆ
Next articleಬಾಗಲಕೋಟೆ: ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ