ವಿಜಯಪುರ: ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ ಹೋಗಿದ್ದರು. ಪರಿಣಾಮ ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿಲ್ಲ.