ಬೆಳಗಾವಿ: ಹುಟ್ಟು ಹೋರಾಟಗಾರ ಎಂದೇ ಹೆಸರು ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲಿನ ಧೂಳಿಗೂ ವಿಜಯೇಂದ್ರ ಸಮನಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತೆ ವಾಗ್ದಾಳಿ ನಡೆಸಿದ್ದು ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸುವಂತೆ ಪಟ್ಟು ಹಿಡಿದಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರನ ಕೈಯಲ್ಲಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ. ಜೀನ್ಸ್ ಪ್ಯಾಂಟ್-ಟೀಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದ್ದು. ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ಬಿ.ವೈ. ವಿಜಯೇಂದ್ರ ಅವರನ್ನು ತಕ್ಷಣವೇ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳುವುದಿಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ಆಗ ನಾನು ಈ ಬಗ್ಗೆ ಹೇಳುತ್ತೇನೆ ಎಂದು ರಮೇಶ ಜಾರಕಿಹೊಳಿ ನೇರವಾಗಿ ಹೇಳಿದರು.