ವಿಜಯೇಂದ್ರ ಇನ್ನೊಮ್ಮೆ ನಾಡಗೀತೆ ಓದಲಿ

ಗದಗ: ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಕ್ರಿಶ್ಚಿಯನ್, ಸಿಖ್ಖರು, ಬೌದ್ಧರು ಎಲ್ಲರೂ ಅಲ್ಪಸಂಖ್ಯಾತರೇ. ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿದುಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು' ಎಂಬ ತತ್ವಕ್ಕೆ ಬಿಜೆಪಿ ಸದಾ ಬದ್ಧ. ಆದರೆ, ಕಾಂಗ್ರೆಸ್ ಸರ್ಕಾರಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು’ ಎಂಬ ನೀತಿ ಅನುಸರಿಸಲು ಹೊರಟು ಕುವೆಂಪು ಅವರು ಕಲ್ಪಿಸಿದ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದ ವಿಜಯೇಂದ್ರ ಹೇಳಿಕೆಗೆ ಅವರು ತಿರುಗೇಟು ನೀಡಿದರು.
ಕುವೆಂಪು ಅವರು ಬರೆದ ನಾಡಗೀತೆಯನ್ನ ವಿಜಯೇಂದ್ರ ಮತ್ತೊಮ್ಮೆ ಓದಲಿ. ಈಗ ಪಾಪ ಅಧ್ಯಕ್ಷ ಆಗಿದ್ದಾರೆ. ಅವರ ಲೇವಲ್‌ನಲ್ಲೇ ಅವರಿದ್ದರೆ ಒಳ್ಳೆಯದು ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಯುವ ಮೊದಲು ಶಕ್ತಿ ಪ್ರದರ್ಶನ ಕುರಿತು ಮಾತನಾಡಿದ ಅವರು, ಚರ್ಚೆ, ವಿವಿಧ ಅಭಿಪ್ರಾಯಗಳನ್ನು ಕೊಡುತ್ತಿದ್ದಾರೆ. ಎಲ್ಲಾ ಮಂತ್ರಿಗಳು ಎಲ್ಲಾ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರ ಸಭೆ ಮಾಡಿ ಎಂದು ಸೂಚನೆ ನೀಡಿದ್ದೇವೆ. ಆ ಕೆಲಸ ಮುಗಿಯಲಿ, ಆ ಮೇಲೆ ಮಿಕ್ಕಿದ ಎಲ್ಲಾ ಯೋಚನೆ ಮಾಡುತ್ತೇವೆ. ಎರಡು ವರ್ಷದ ಸಂಭ್ರಮ ಮಾಡಲೇಬೇಕಾಗಿದೆ, ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.