ಬಿಜೆಪಿ ಬಂಡಾಯ: ಯತ್ನಾಳ್ ನೇತೃತ್ವದಲ್ಲಿ ಪ್ರತ್ಯೇಕ ಸಭೆ
ಬೆಂಗಳೂರು: ಸಂಘಟನಾ ಚತುರ ವಿಜಯೇಂದ್ರ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ 1 ವರ್ಷ ಪೂರೈಸಿದ್ದಾರೆ.
ಬಿಜೆಪಿ ಬಂಡಾಯ- ಯತ್ನಾಳ್ ನೇತೃತ್ವದಲ್ಲಿ ಪ್ರತ್ಯೇಕ ಸಭೆ: ನಗರದ ಸದಾಶಿವನಗರದಲ್ಲಿರುವ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಇಂದು ಬಿಜೆಪಿ ಅಸಮಾಧಾನಿತರ ಪ್ರತ್ಯೇಕ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಬಿಜೆಪಿಯ ರೆಬೆಲ್ ಶಾಸಕರು ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪ್ರೆಸ್ ಮೀಟ್ ನಡೆಯಲಿದ್ದು, ಕುತೂಹಲ ಕೆರಳಿಸಿದೆ.