Home ಅಪರಾಧ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

0

ಮಂಗಳೂರು: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ ಹಲವರಿಗೆ ವಂಚನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫಿರ್ಯಾದಿದಾರರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಫಿರ್ಯಾದಿದಾರರಿಂದ ರೂ.1,65,000/- ಹಣವನ್ನು ಪಡೆದು ಅಲ್ಲದೇ ಸಾಕಷ್ಟು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ವಂಚಿಸಿದ್ದಕ್ಕಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಬಿ ಘಟಕದವರು ತನಿಖೆ ನಡೆಸುತ್ತಿದ್ದಾರೆ‌.

ಇನ್ನು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್,  ಎಂಬಾತನ ಹೆಚ್ಚಿನ ತನಿಖೆ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದ್ದು,ವಆರೋಪಿಯ ವಿರುದ್ದ ಈಗಾಗಲೇ ಯಾವುದೇ ರಹದಾರಿ ಪಡೆಯದೇ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಈ  ಎರಡೂ ಪ್ರಕರಣಗಳು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಮುಂದಿನ ತನಿಖೆಯ ಬಗ್ಗೆ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.

Exit mobile version