ಕಾರವಾರ: ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ರವಾನೆ ಮಾಡಿದ್ದ ಆರೋಪದಡಿ ಎನ್ಐಎ ಪೊಲೀಸರು ಉತ್ತರ ಕನ್ನಡದ ಕಾರವಾರ ತಾಲೂಕಿನ ಇಬ್ಬರನ್ನು ಬಂಧಿಸಿದ್ದಾರೆ.
ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ ನಾಯ್ಕ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ವಶಕ್ಕೆ ಪಡೆದಿದೆ. ಹೈದರಾಬಾದ್ ಮೂಲದ ಎನ್ಐಎ ಪೊಲೀಸರು ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ತಂಡ ಸೋಮವಾರ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ.