ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ: 21ನೇ ಶತಮಾನದ ಆತಂಕಗಳು…

0
6

ಬೆಂಗಳೂರು: 6ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಕುರಿತು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

Previous articleಭದ್ರಾ ಮೇಲ್ದಂಡೆ ಯೋಜನೆಗೆ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್
Next articleಅಂಬೇಡ್ಕರ್‌ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಉದ್ವಿಗ್ನ ಪರಿಸ್ಥಿತಿ