ಮಂಗಳೂರು: ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಪ್ರೌಢಶಾಲಾ ವಿದ್ಯಾರ್ಥಿನಿ ಹಾಗೂ ಆಟೋರಿಕ್ಷಾ ಚಾಲಕ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಮಂಡೆಕಾಪುವಿನ ಪ್ರಿಯೇಶ್-ಚಂದ್ರಾವತಿ ದಂಪತಿ ಪುತ್ರಿ ಶ್ರೇಯಾ (೧೫) ಮತ್ತು ಆಟೋ ಚಾಲಕ ಪ್ರದೀಪ್ (೪೨) ಮೃತಪಟ್ಟವರು. ಬಾಲಕಿಯ ಮನೆಯಿಂದ ಅರ್ಧ ಕಿ.ಮೀ. ದೂರದ ಕಾಡಿನಲ್ಲಿ ಭಾನುವಾರ ಬೆಳಗ್ಗೆ ೧೦.೩೦ರ ಸುಮಾರಿಗೆ ಇವರಿಬ್ಬರ ಮೃತದೇಹಗಳು ಪತ್ತೆಯಾಗಿವೆ.
ಫೆಬ್ರವರಿ ೧೧ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸ್‌ದೂರದಾಖಲಾಗಿತ್ತು. ನಾಪತ್ತೆಯಾಗಿ ತಿಂಗಳಾಗುತ್ತಾ ಬಂದರೂ ಯಾವುದೇ ಸುಳಿವು ಲಭಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಪರಿಸರವಾಸಿಗಳು ಮನೆ ಪರಿಸರದಕಾಡನ್ನು ಕೇಂದ್ರೀಕರಿಸಿ ಶೋಧ ನಡೆಸಲಾರಂಭಿಸಿದ್ದರು. ಭಾನುವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.