ವಿದ್ಯಾರ್ಥಿನಿ-ರಿಕ್ಷಾ ಚಾಲಕನ ಮೃತದೇಹ ಕಾಡಿನಲ್ಲಿ ಪತ್ತೆ

0
62

ಮಂಗಳೂರು: ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಪ್ರೌಢಶಾಲಾ ವಿದ್ಯಾರ್ಥಿನಿ ಹಾಗೂ ಆಟೋರಿಕ್ಷಾ ಚಾಲಕ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.
ಮಂಡೆಕಾಪುವಿನ ಪ್ರಿಯೇಶ್-ಚಂದ್ರಾವತಿ ದಂಪತಿ ಪುತ್ರಿ ಶ್ರೇಯಾ (೧೫) ಮತ್ತು ಆಟೋ ಚಾಲಕ ಪ್ರದೀಪ್ (೪೨) ಮೃತಪಟ್ಟವರು. ಬಾಲಕಿಯ ಮನೆಯಿಂದ ಅರ್ಧ ಕಿ.ಮೀ. ದೂರದ ಕಾಡಿನಲ್ಲಿ ಭಾನುವಾರ ಬೆಳಗ್ಗೆ ೧೦.೩೦ರ ಸುಮಾರಿಗೆ ಇವರಿಬ್ಬರ ಮೃತದೇಹಗಳು ಪತ್ತೆಯಾಗಿವೆ.
ಫೆಬ್ರವರಿ ೧೧ರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸ್‌ದೂರದಾಖಲಾಗಿತ್ತು. ನಾಪತ್ತೆಯಾಗಿ ತಿಂಗಳಾಗುತ್ತಾ ಬಂದರೂ ಯಾವುದೇ ಸುಳಿವು ಲಭಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಪರಿಸರವಾಸಿಗಳು ಮನೆ ಪರಿಸರದಕಾಡನ್ನು ಕೇಂದ್ರೀಕರಿಸಿ ಶೋಧ ನಡೆಸಲಾರಂಭಿಸಿದ್ದರು. ಭಾನುವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Previous articleಬ್ರಾಹ್ಮಣ ಸಮಾಜ ಸದೃಢವಾಗಿ ಬೆಳೆಯಲು ಪ್ರಾಮಾಣಿಕರು ಅಧ್ಯಕ್ಷರಾಗಲಿ
Next articleಶರೀಫ ಮಹಾರಥೋತ್ಸವ ಸಂಪನ್ನ