ಚಿಕ್ಕಮಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ರಿಡ್ ಸ್ಪೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಫ್ರಿಡ್ಜ್ ಸ್ಪೋಟಗೊಂಡಿದ್ದು, ಸ್ಪೋಟಗೊಂಡ ಪರಿಣಾಮ ಮನೆ ಹೊತ್ತಿ ಉರಿದಿದೆ. ಬೆಂಕಿಯಿಂದಾಗಿ ಮನೆಯಲ್ಲಿರುವ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸದ್ಯ ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.