ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಸಾವು

0
34

ಹಾವೇರಿ: ವಿವಾಹ ವಾರ್ಷಿಕೋತ್ಸವದ ದಿನದಂದೇ ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಹಾನಗಲ್ಲ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಸದೇವ ಹುಡೇದ (32) ಮೃತಪಟ್ಟ ಕಾರ್ಮಿಕ. ಮದುವೆಯಾಗಿ ಇಂದಿಗೆ ಮೂರು ವರ್ಷವಾಗಿತ್ತು. ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ವಿದ್ಯುತ್ ಕೆಲಸಕ್ಕೆ ಎಂದು ಹೋಗಿದ್ದರು. ಈ ವೇಳೆ ಕರೆಂಟ್ ಶಾಕ್ ಹೊಡೆದು ವಿದ್ಯುತ್ ಕಂಬದಿಂದ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಮಾಹಿತಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Previous articleಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ
Next articleಪಾಕ್ ವಿರುದ್ಧದ ಕಾರ್ಯಾಚರಣೆ ಬೂಟಾಟಿಕೆ