ಬೆಂಗಳೂರು: ತ್ರಿಶೂಲ-ತಿಲಕದ ಆಕಾರವಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವಂತೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಇದು ಯಾವ ಸೀಮೆಯ ಲಾಜಿಕ್!!! ಎಂದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸಿಎಂ ಸಿದ್ದರಾಮಯ್ಯ ಅವರೆ, ಇದು ಯಾವ ಸೀಮೆಯ ಲಾಜಿಕ್!!! ಪ್ರತಿನಿತ್ಯ ಮೈಕುಗಳಲ್ಲಿ ಊರಿಗೆಲ್ಲಾ ಕೇಳುವ ರೀತಿ ಕೂಗುವುದು ಇತರ ಧರ್ಮಿಯರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಿಲ್ಲವಾ..??
ಹಿಂದೂ ವಿರೋಧಿ ನಿರ್ಣಯ ಅಂಗೀಕರಿಸಿರುವ ಗಂಗಾವತಿಯ ತಹಶೀಲ್ದಾರ್ ಅವರನ್ನು ಕೂಡಲೇ ಅಮಾನತು ಮಾಡಿ. ಇಷ್ಟರ ಮೇಲೆಯೂ ತಹಶೀಲ್ದಾರ್ ಆದೇಶದಂತೆ ಗಂಗಾವತಿಯಲ್ಲಿ ವಿದ್ಯುತ್ ದೀಪಗಳನ್ನು ತೆರವುಗೊಳಿಸಲು ಮುಂದಾದರೇ, ಗಂಗಾವತಿಗೆ ನಾವೇ ಬಂದು ವಿದ್ಯುತ್ ದೀಪಗಳನ್ನು ಅಳವಡಿಸಬೇಕಾಗುತ್ತದೆ, ಎಚ್ಚರ!! ಎಂದಿದ್ದಾರೆ.

                























