Home ನಮ್ಮ ಜಿಲ್ಲೆ ಕಲಬುರಗಿ ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

0

ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ. ಗೊಲ್ಲಾಳಪ್ಪ ನಾಗಾವಿ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ನಾಶವಾಗಿದೆ. ಜೆಸ್ಕಾಂ ನಿರ್ಲಕ್ಷ್ಯಕ್ಕೆ 6 ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ.
ಕಳೆದ ಹಲವಾರು ದಿನಗಳಿಂದ ವಿದ್ಯುತ್ ತಂತಿ ಜೋತು ಬಿದ್ದು ಬೆಳಗ್ಗೆ ಹಾನಿಯಾಗುವ ಕುರಿತು ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಕೈಗೆ ಬಂದ ಬೆಳೆ ಬಾಯಿಗೆ ಬರದಂತಾಗಿದೆ. ಪ್ರಾರಂಭವಾಗಿದ್ದು ಇನ್ನಷ್ಟೇ ಕಬ್ಬು ಕಟಾವು ಮಾಡಿ ಸಕ್ಕರೆ ಕಾರ್ಖಾನೆಗೆ ಪೂರೈಕೆ ಮಾಡಲು ರೈತ ಗೊಲ್ಲಾಳಪ್ಪ ತಯಾರಿ ನಡೆಸಿದರು. ಈ ವೇಳೆಯಲ್ಲಿಯೇ ವಿದ್ಯುತ್ ತಂತಿ ತಗಲಿ ಕಬ್ಬು ಬೆಂಕಿಗೆ ಆಹುತಿ ಆಗಿರುವುದರಿಂದ ಅಂದಾಜು 8 ಲಕ್ಷ ರೂ.ಗಳಿಗಿಂತ ಹೆಚ್ಚಿನ ಹಾನಿ ಸಂಭವಿಸಿ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.
ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version