ಚಿಕ್ಕಮಗಳೂರು :ಭತ್ತದ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಕುಂದೂರು ಸಮೀಪದ ಕಾರ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರ್ಲಗದ್ದೆ ಗ್ರಾಮದ ಕೃಷಿಕ ಸತೀಶ್ ಶೆಟ್ಟಿ (45 ವರ್ಷ) ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ದುರ್ದೈವಿ. ಮುಂಜಾನೆ ಎಂದಿನಂತೆ ಗದ್ದೆಗೆ ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿ ಸತೀಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ,ಮಧ್ಯಾಹ್ನದ ಹೊತ್ತಿಗೆ ವಿಷಯ ಕುಟುಂಬದವರಿಗೆ ತಿಳಿದಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.